ಲೈಂಗಿಕ ಕಿರುಕುಳದ ಆರೋಪದ ಮೇಲೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಕನ್ಯಾಕುಮಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಾಸುದೇವನ್ ಎಂದು ಗುರುತಿಸಲಾಗಿರುವ ಆರೋಪಿ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸುತ್ತಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಈ ಕುರಿತು 22 ವರ್ಷದ ವಿದ್ಯಾರ್ಥಿಯೊಬ್ಬ ಕಾಲೇಜು ಅಧಿಕಾರಿಗಳಿಗೆ ದೂರು ನೀಡಿದ್ದು, ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಪ್ರಾಧ್ಯಾಪಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ವಜಾಗೊಳಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಕೂಡ ನಡೆಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಕಾಲೇಜು ವಿದ್ಯಾರ್ಥಿಗಳು, ಹಲವಾರು. ವಿದ್ಯಾರ್ಥಿನಿಯೊಬ್ಬರಿಗೆ ವಾಸುದೇವನ್ ಅಶ್ಲೀಲ ವಿಡಿಯೋಗಳು ಮತ್ತು ಪಠ್ಯ ಸಂದೇಶಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿನಿ ತನ್ನ ಸಹೋದರನಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸಹೋದರ ಪ್ರಾಧ್ಯಾಪಕರನ್ನು ಭೇಟಿಯಾಗಿ ಮಾತನಾಡಿದ್ದಾನೆ. ವಿದ್ಯಾರ್ಥಿ ದೂರಿನ ನಂತರ ಕಾಲೇಜು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ವಿದ್ಯಾರ್ಥಿನಿಯನ್ನೇ ಅಮಾನತುಗೊಳಿಸಿದ್ದಾರೆ ಎಂದು ದೂರಿದ್ದಾರೆ.
ಪ್ರತಿಭಟನೆ ತೀವ್ರಗೊಂಡಾಗ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ವಾಸುದೇವನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಏತನ್ಮಧ್ಯೆ, ವಾಸುದೇವನ್ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ಹುಡುಗಿಯ ಸಹೋದರನ ವಿರುದ್ಧ ತನ್ನ ಮೇಲೆ ಹಲ್ಲೆ ನಡೆಸಿ ಗಂಭೀರವಾದ ಗಾಯಗಳನ್ನು ಉಂಟುಮಾಡಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.