alex Certify BREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ದೂರು ನೀಡಿದ್ದು, ಅರುಣ್ ಕುಮಾರ್ ಪುತ್ತಿಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿದ್ದಾರೆ.

2023ರಲ್ಲಿ ಬೆಂಗಳೂರಿನ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಫೋಟೋ, ಸೆಲ್ಫಿ, ವಿಡಿಯೋ ಮಾಡಿದ್ದಾರೆ. ಅವುಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ.

ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪರಿಚಿತರಾಗಿದ್ದು, ನಂತರ ಬೆಂಗಳೂರಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...