
ದಾವಣಗೆರೆ: ರಾಜ್ಯ ಸರ್ಕಾರ ಪತನಕ್ಕೆ ನಾಯಕರೊಬ್ಬರು 1000 ಕೋಟಿ ರೂಪಾಯಿ ತೆಗೆದಿರಿಸಿದ್ದಾರೆ ಎಂದು ಆರೋಪಿಸಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದಾವಣಗೆರೆಯ ಗಾಂಧಿನಗರ ಠಾಣೆಗೆ ವರ್ಗಾವಣೆಗೊಂಡಿದೆ.
ಕಾಂಗ್ರೆಸ್ ಗೆ 135 ಸ್ಥಾನಗಳನ್ನು ನೀಡಿದ ರಾಜ್ಯದ ಮತದಾರರು 5 ವರ್ಷ ಸುಭದ್ರ ಆಡಳಿತ ನಡೆಸಲು ಜನಾದೇಶ ನೀಡಿದ್ದಾರೆ. ಅಧಿಕಾರವಿಲ್ಲದೆ ಹತಾಶರಾದ ಬಿಜೆಪಿಯ ಕೆಲವು ನಾಯಕರು ಸರ್ಕಾರ ಪತನಗೊಳಿಸಲು ಸಂಚು ರೂಪಿಸಿರುವುದು ಯತ್ನಾಳ್ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಇಂತಹ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ.