ಬೆಂಗಳೂರು: ಸಚಿವ ಡಾ.ಡಿ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಸಚಿವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ಆಗಮಿಸಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾದ ಸುಧಾಕರ್, ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ರಾಜಕೀಯ ಕುತಂತ್ರ. ಅನಗತ್ಯವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವ ಸುಧಾಕರ್ ವಿರುದ್ಧ ಭೂಕಬಳಿಕೆ, ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಸುಬ್ಬಮ್ಮ ಎಂಬುವವರು ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಚಿವ ಸುಧಾಕರ್ ಮೋಸದಿಂದ ಜಮೀನು ಕಬಳಿಕೆ ಮಾಡಿದ್ದಾರೆ. ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ ಜಮೀನು ಕಬಳಿಸಿದ್ದಾರೆ. ಕೇಸ್ ಕೋರ್ಟ್ ನಲ್ಲಿದ್ದರೂ ಕೂಡ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.