
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕು ಎಂದು ಹೇಳಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬಿಎನ್ಎಸ್ ಸೆಕ್ಷನ್ 299 ರ ಅಡಿ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಕ್ಪ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸ್ವಾಮೀಜಿ ಇಂತಹ ಹೇಳಿಕೆ ನೀಡಿದ್ದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸ್ವಾಮೀಜಿ ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸುವಂತೆ ಒತ್ತಾಯಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಬಗ್ಗೆ ಸೈಯದ್ ಎಂಬುವವರು ದೂರು ನೀಡಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.