ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಎಸ್ ಐಟಿ ಪ್ರಕರಣದ ಹಿಂದಿನ ತನಿಖಾಧಿಕಾರಿಗಳ ವಿರುದ್ಧವೇ ಎಫ್ ಐ ಆರ್ ದಾಖಲಿಸಿದೆ.
ಎಸ್.ಐಟಿ ತನಿಖಾಧಿಕಾರಿ ಕೆ.ರವಿಶಂಕರ್ ನೀಡಿರುವ ದೂರಿನ ಅನ್ವಯ ಪ್ರಕರಣದ ಹಿಂದಿನ ತನಿಖಾಧಿಕಾರಿಗಳು ಹಾಗೂ ತಂಡದ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಹಿಂದೆ ಆರೋಪಿಗಳಿಂದ ಲ್ಯಾಪ್ ಟಾಪ್, ಮೊಬೈಲ್, ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನೀಡಲಾಗಿತ್ತು. ಸಧ್ಯ ಆ ದಾಖಲೆಗಳನ್ನು ಎಸ್ ಐಟಿ ತಂಡ ವಶಕ್ಕೆ ಪಡೆದಿದ್ದು, ಮೂಲ ಫೈಲ್ ಗಳ ಜೊತೆಗೆ ಹೆಚ್ಚುವರಿ ಫೈಲ್ ಗಳನ್ನು ಸೃಷ್ಟಿಸಿರುವುದು ಕಂಡುಬಂದಿದೆ.
ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರಿಂದಲೇ ಸಾಕ್ಷ್ಯ ತಿರುಚಲಾಗಿದೆ. 2020ರ ಸೆಪ್ಟೆಂಬರ್ 9ರಿಂದ 2020ರ ಡಿಸೆಂಬರ್ 16ರವರೆಗೆ ಸಿಸಿಬಿ ಕಚೇರಿ ಮತ್ತಿತರ ಕಡೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಸಿಸಿಬಿ ಪೊಲೀಸರು ಅಧಿಕಾರ ದುರಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೊಪ ಕೂಡ ಕೆಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.