ಹುಬ್ಬಳ್ಳಿ : ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ 42 ಮಂದಿ ವಿರುದ್ಧ ಎಫ್ ಆರ್ ದಾಖಲಾಗಿದೆ.
ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಿದ 42 ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಆರ್ ಅಶೋಕ್ , ಮಹೇಶ್ ಟೆಂಗಿನಕಾಯಿ ಸೇರಿದಂತೆ 42 ಮಂದಿ ವಿರುದ್ಧ ಎಫ್ ಆರ್ ದಾಖಲಾಗಿದೆ.
ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಅಭಿಯಾನ ಆರಂಭಿಸಿದೆ. ನಾನೂ ಕರಸೇವಕ ನನ್ನನ್ನೂ ಬಂಧಿಸಿ ಎಂದು ಬಿಜೆಪಿ ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸುತ್ತಿದೆ. ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದೆ.