ಮಂಗಳೂರು: ಬಿಲ್ಲವ ಸಮಾಜದ ಒಂದು ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದು ಹೇಳಿಕೆ ನೀಡಿದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ಅವರು ನೀಡಿದ ದೂರಿನ ಅನ್ವಯ ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬಿಲ್ಲವ ಸಮುದಾಯದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಿದ್ದಾರೆ. ಇದಕ್ಕೆ ನನ್ನ ಬಳಿ 10 ಸಾವಿರ ದಾಖಲೆ ಇದೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಬಿಲ್ಲುವ ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಎಂದು ಹೆಣ್ಣು ಮಕ್ಕಳ ಬಗ್ಗೆ ತೀರಾ ಅವಹೇಳನಕಾರಿಯಾಗಿ ಸಂಜೀವ ಪೂಜಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಸಂಜೀವ ಪೂಜಾರಿ ಅವರ ಆಡಿಯೋ ವೈರಲ್ ಆಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹಿಂದೂ ಜಾಗರಣಾ ವೇದಿಕೆ ಕರೆ ನೀಡಿತ್ತು, ಇದರ ಬೆನ್ನಲ್ಲೇ ಎಫ್ಐಆರ್ ದಾಖಲಿಸಲಾಗಿದೆ.