ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ.
ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಎಂ ಹಾಗೂ ಮೈಸೂರು ದಸರಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ಆಧರಿಸಿ ತುಮಕೂರಿನ ವ್ಯಕ್ತಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಶ್ರೀನಿವಾಸ ತನ್ನ ಫೇಸ್ ಬುಕ್ ಖಾತೆಯಲ್ಲಿ ಮಹಿಷಾಸುರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಫೋಟೋವನ್ನು ಎಡಿಟ್ ಮಾಡಿ ಅವಹೇಳನ ಮಾಡಲಾಗಿತ್ತು. ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.