ಬೆಂಗಳೂರು : ರಾಜ್ಯಸಭೆ ಚುನಾವಣೆ ಬಳಿಕ ವಿಧಾನಸೌಧದಲ್ಲಿ ಸೈಯದ್ ನಾಸೀರ್ ಹುಸೇನ್ ಬೆಂಬಲಿಗ ಎನ್ನಲಾದ ವ್ಯಕ್ತಿಯೋರ್ವ ಪಾಕಿಸ್ತಾನ್ ಜಿಂದಾ ಬಾದ್ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿರುದ್ಧ ಸೆಕ್ಷನ್ 505(1)(B), 153B ಅಡಿಯಲ್ಲಿ ಕೇಸ್ ದಾಖಲಾಗಿದೆ.
ಪಾಕ್ ಪರ ಘೋಷಣೆ ಕೂಗಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರ ಮೂರು ತಂಡ ರಚಿಸಲಾಗಿದೆ. ಒಂದು ತಂಡ ತಾಂತ್ರಿಕ ಮಾಹಿತಿ ಅಧರಿಸಿ ಪತ್ತೆ ಕಾರ್ಯದಲ್ಲಿ ತೊಡಗಿದೆ. ಮತ್ತೊಂದು ತಂಡ ವಿಧಾನಸೌಧಕ್ಕೆ ನಾಸೀರ್ಹುಸೇನ್ ಜೊತೆಗೆ ಬಂದವರ ಮಾಹಿತಿ ಸಂಗ್ರಹಿಸಲು ಮುಂದಾಗಿದೆ. ಇನ್ನೊಂದು ತಂಡ ಘಟನೆಯ ವಿಡಿಯೋ ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಹುಡುಕಾಡುತ್ತಿದೆ.