
ಕೊಪ್ಪಳ: ಗಂಗಾವತಿಯ ಹಿಂದೂ ಮಹಾ ಮಂಡಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮಿಯಾ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಐವರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಯಮನೂರ ರಾಥೋಡ್, ರೌಡಿ ಶೀಟರ್ ಗಳಾದ ಶ್ರೀಕಾಂತ್ ಹೊಸಕೇರಿ, ಕುಮಾರ, ಚನ್ನಬಸವ, ಸಂಗಮೇಶ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದೂರು ದಾಖಲಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 28ರಂದು ಗಂಗಾವತಿಯ ಹಿಂದೂ ಮಹಾ ಮಂಡಳಿಯ ಗಣಪತಿ ವಿಸರ್ಜನೆ ಮೆರವಣಿಗೆ ಜಾಮಿಯಾ ಮಸೀದಿ ಬಳಿ ಬಂದ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ, ಜೈಶ್ರೀರಾಮ್ ಸೇರಿದಂತೆ ಹಿಂದೂ ದೇವರ ಘೋಷಣೆ ಕೂಗಿದ್ದಾರೆ. ಗಲಭೆಯ ಉದ್ದೇಶದಿಂದಲೇ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಹಿಂದೂ ದೇವರ ಹೆಸರಲ್ಲಿ ಘೋಷಣೆ ಕೂಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗಂಗಾವತಿ ನಗರ ಠಾಣೆ ಪೋಲೀಸರು ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.