ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಲ್ಲಿ ಬಿಜೆಪಿ ಮುಖಂಡನ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ರೂಪೇಶ್ ಅವರು ನೀಡಿದ ದೂರಿನ ಮೇರೆಗೆ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ.
ಕೋರಮಂಗಲದ ಶಾಂತಿನಗರ ಕೋಆಪರೇಟಿವ್ ಸೊಸೈಟಿ ಲೇಔಟ್ ನ ಬಿಜೆಪಿ ಕಚೇರಿ ನಾಮಫಲಕ, ಕಾಂಪೌಂಡ್ ಮೇಲೆ ಪಕ್ಷದ ಚಿಹ್ನೆ, ಪ್ರಧಾನಿ ಮೋದಿ ಅವರ ಭಾವಚಿತ್ರ ಸೇರಿದಂತೆ ಪಕ್ಷದ ಇತರರ ಭಾವಚಿತ್ರಗಳನ್ನು ಅಂಟಿಸಲಾಗಿತ್ತು.
ಈ ಬಗ್ಗೆ ಸ್ಥಳೀಯರು ಚುನಾವಣಾ ಅಧಿಕಾರಿಗೆ ದೂರು ನೀಡಿದ್ದರು. ನಂತರ ಚುನಾವಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಯಾವುದೇ ಅನುಮತಿ ಪಡೆಯದೆ ಭಾವಚಿತ್ರ ಅಂಟಿಸಿರುವುದು ಕಂಡುಬಂದಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.