ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಯೂಟ್ಯೂಬರ್ ವಿರುದ್ಧ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮ ಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ತಿರುಚಿದ ವಿಡಿಯೋ ಹರಿಬಿಡಲಾಗಿದೆ. ರಾಹುಲ್ ಗಾಂಧಿ ಆ ರೀತಿ ಹೇಳಿಲ್ಲ. ಯೂಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ವಕೀಲ ಪಿ.ಕೆ. ಬೋಪಣ್ಣ ದೂರು ಸಲ್ಲಿಸಿದ್ದು, ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಆರೋಪದ ಮೇಲೆ ಯುಟ್ಯೂಬರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.