ಮನೆಯಲ್ಲಿ ಏಕಾಏಕಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸಾವನ್ನಪ್ಪಿದ್ದಾರೆ. 32 ವರ್ಷದ ಮಹಿಳೆ ಗುಲ್ಬಹರ್ ಹಾಗೂ ಆಕೆಯ ಇಬ್ಬರು ಮಕ್ಕಳು ಹಾಗೂ ಸಂಬಂಧಿಕರ ಮಗ ಸೇರಿದಂತೆ ನಾಲವರು ಸಾವನ್ನಪ್ಪಿದ್ದಾರೆ.
ಮಹಿಳೆಯ ಪತಿ ಶಹನವಾಜ್ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.