ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಗೆ ನೋಟಿಸ್ ನೀಡಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪಾಲಿಕೆ ಕೇಂದ್ರ ಕಚೇರಿಯ ಕ್ವಾಲಿಟಿ ಕಂಟ್ರೋಲ್ ಲ್ಯಾಬ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರದಿಂದ ತನಿಖೆ ಆರಂಭವಾಗಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 9 ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಚೀಫ್ ಎಂಜಿನಿಯರ್ ಶಿವಕುಮಾರ್, ಆಪರೇಟರ್ ಜ್ಯೋತಿ ಕಂಡಿಷನ್ ಮೊದಲು ಕ್ರಿಟಿಕಲ್ ಆಗಿತ್ತು. ಸದ್ಯ ಅರೋಗ್ಯ ಸುಧಾರಿಸಿದ ಎಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಮಾಹಿತಿ ಬಂದಿದೆ, ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮುಖ್ಯ ಎಂಜಿನಿಯರ್ ಗೆ ನೋಟಿಸ್ ನೀಡಲಾಗಿದೆ.