ಹಾವೇರಿ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.
ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಪೂಟ್ ವೇರ್ ಹಾಗೂ ಹೋಟೆಲ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯಿಂದಾಗಿ ಸುತ್ತಮುತ್ತಲು ದಟ್ಟ ಹೊಗೆ ಆವರಿಸಿದೆ. ಬೆಣ್ಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ. 30 ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಶಾಸಕ ಯು.ಬಿ.ಬಣಕಾರ್ ಭೇಟಿ ನೀಡಿದ್ದಾರೆ. ಹಂಸಭಾವಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.