
ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದಿದೆ.
ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ ಮೂರು ದಿನಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ವಾರ್ಡ್ ಗೆ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.