alex Certify ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಗುಜರಾತ್‌ ನ ಅಹಮದಾಬಾದ್‌ ನ ಸಾಹಿಬಾಗ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಆಗ್ನಿ ಜ್ವಾಲೆಯನ್ನು ನಂದಿಸಲು ಸುಮಾರು 20-25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. 100 ಕ್ಕೂ ಹೆಚ್ಚು ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎರಡನೇ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾದಿಯಾ ತಿಳಿಸಿದ್ದಾರೆ.

ಮುಂಜಾನೆ 4:30ರ ಸುಮಾರಿಗೆ ಕರೆ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿವೆ. ಬೆಂಕಿ ಹೊತ್ತಿಕೊಂಡ ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಲೇ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಂಡಿ ಚಂಪಾವತ್ ಪಿಟಿಐಗೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...