
ಮಧುರೈ: ತಮಿಳುನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿದ್ದು, ಬೆಂಕಿ ನಂದಿಸುವ ವೇಳೆಯಲ್ಲಿ ಇಬ್ಬರು ಅಗ್ನಿಶಾಮಕದಳದ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಶುಕ್ರವಾರ ತಡರಾತ್ರಿ ಮಧುರೈನ ನವಬತ್ಕಾನಾ ಪ್ರದೇಶದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ವೇಳೆಯಲ್ಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಗ್ನಿಶಾಮಕದಳದ ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ. ಸತತ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.