
ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬೆಂಗಳೂರು-ಹೌರಾ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಹೌರಾ ಎಕ್ಸ್ ಪ್ರೆಸ್ ನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ.
ಹೌರಾ ಎಕ್ಸ್ ಪ್ರೆಸ್ ನ ಎಸ್ 9 ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಯಿತು. ಲೊಕೊಮೊಟಿವ್ ಪೈಲಟ್ ಬೆಂಕಿಯನ್ನು ಗಮನಿಸಿ ಎಚ್ಚರಿಕೆ ನೀಡಿದ ನಂತರ ಪ್ರಯಾಣಿಕರು ರೈಲಿನಿಂದ ಇಳಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.