
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಮಾಡಪಲ್ಲಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಊರ ದೇವತೆಯ ಉತ್ಸವಮೂರ್ತಿಗೆ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ.
ಇಡೀ ದಿನ ಉತ್ಸವ ಮೂರ್ತಿ ಮೆರವಣಿಗೆ ನಡೆದು ಮಧ್ಯರಾತ್ರಿ ವೇಳೆಗೆ ಪೂರ್ಣಗೊಂಡಿದೆ. ನಂತರ ಜನ ತಮ್ಮ ಮನೆಗಳಿಗೆ ಹೋಗಿ ಮಲಗಿದ್ದಾರೆ. ನಂತರದಲ್ಲಿ ಉತ್ಸವಮೂರ್ತಿಗೆ ಬೆಂಕಿ ತಗುಲಿದ್ದು, ಕೆಲವು ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವಿಚಾರ ಗ್ರಾಮಸ್ಥರಿಂದ ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.