alex Certify BREAKING: ರಾಜ್ಯದಲ್ಲಿ ಎರಡು ಅಗ್ನಿ ಅವಘಡ: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಬೆಂಕಿಗಾಹುತಿ; ಗೋದಾಮಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಕೊಬ್ಬರಿ ನಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಎರಡು ಅಗ್ನಿ ಅವಘಡ: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಬೆಂಕಿಗಾಹುತಿ; ಗೋದಾಮಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಕೊಬ್ಬರಿ ನಾಶ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಬೆಂಕಿಗಾಹುತಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸಿಲಿಂಡರ್ ಸ್ಪೋಟದಿಂದ ಬೆಂಕಿ ತಗುಲಿ ಮಾಬುಸಾಬ್ ಎಂಬುವರ ಮನೆ ಸುಟ್ಟು ಕರಕಲಾಗಿದೆ. ಸ್ಪೋಟದ ಶಬ್ದಕ್ಕೆ ಕೇಳಿ ಕುಟುಂಬದವರು ಮನೆಯಿಂದ ಹೊರಗೆ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಪೋಟ ಹಾಗೂ ಬೆಂಕಿಯಿಂದಾಗಿ ಮನೆಯಲ್ಲಿದ್ದ ಬಟ್ಟೆ, ಗೃಹ ಉಪಯೋಗಿ ವಸ್ತುಗಳು ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟಿವೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗೋದಾಮಿಗೆ ಬೆಂಕಿ

ಗೋದಾಮಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಕೊಬ್ಬರಿ ನಾಶವಾಗಿದೆ. ಚೋಳನಹಳ್ಳಿಯ ಪುಟ್ಟಸ್ವಾಮಿಗೌಡ ಅವರಿಗೆ ಸೇರಿದ ಗೋದಾಮಿನಲ್ಲಿ ಕೊಬ್ಬರಿ ಭಸ್ಮವಾಗಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೋಳನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 4 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ಸುಟ್ಟಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...