alex Certify SHOCKING: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹೃದಯ ವಿದ್ರಾವಕ ಘಟನೆ, ವ್ಯಕ್ತಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹೃದಯ ವಿದ್ರಾವಕ ಘಟನೆ, ವ್ಯಕ್ತಿ ಸಜೀವ ದಹನ

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸೋಮಶೇಖರಪ್ಪ(53) ಮೃತಪಟ್ಟವರು ಎಂದು ಹೇಳಲಾಗಿದೆ. ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದೆ ಎನ್ನಲಾಗಿದ್ದು, ಬೆಂಕಿಯ ಜ್ವಾಲೆ ಇಡೀ ಮನೆಗೆ ವ್ಯಾಪಿಸಿ ಸೋಮಶೇಖರಪ್ಪ ಸಜೀವ ದಹನವಾಗಿದ್ದಾರೆ. ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ನಡೆಸಿದರೂ ಸಾಧ್ಯವಾಗಿಲ್ಲ. ಅಕ್ಕಪಕ್ಕದ ಮನೆಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಟಿ. ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...