ಬೆಂಗಳೂರು: 21 ಮೀಟರ್ ಎತ್ತರದ ಕಟ್ಟಡ ನಿರ್ಮಾಣಕ್ಕೆ ಅಗ್ನಿಶಾಮಕ ಇಲಾಖೆ ಅನುಮತಿ ಕಡ್ಡಾಯವಾಗಿದೆ. ಎತ್ತರದ ಕಟ್ಟಡಗಳ ನಿರ್ಮಾಣಕ್ಕೆ ಮೊದಲೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಎನ್.ಒ.ಸಿ. ಪಡೆಯುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಅಗ್ನಿಶಾಮಕ ದಳ(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧೇಯಕ ಮಂಡಿಸಿದ್ದಾರೆ. 21 ಮೀಟರ್ ಅಥವಾ ಅದಕ್ಕಿಂತ ಎತ್ತರದ ಕಟ್ಟಡಗಳ ನಿರ್ಮಿಸುವ ಮೊದಲು ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯಿಂದ ಕಡ್ಡಾಯವಾಗಿ ಎನ್.ಒ.ಸಿ. ಕಡ್ಡಾಯವಾಗಿ ಪಡೆಯಲು ಅವಕಾಶ ಕಲ್ಪಿಸಿ ನಿಯಮಕ್ಕೆ ತಿದ್ದುಪಡಿ ತರಲಾಗಿದೆ.
ಬಿಬಿಎಂಪಿಯಿಂದ ನಕ್ಷೆ ಮಂಜೂರಾತಿ ಪಡೆಯುವ ಮೊದಲೇ ಅಗ್ನಿಶಾಮಕ ಇಲಾಖೆಯಿಂದ ಎನ್.ಒ.ಸಿ. ಪಡೆಯಬೇಕು. ಕಟ್ಟಡ ಪೂರ್ಣಗೊಂಡ ನಂತರ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಬೇಕು. ಜಿಲ್ಲಾ ಅಧಿಕಾರಿಗಳು ಎರಡು ವರ್ಷಗಳಿಗೊಮ್ಮೆ ಪರಿಶೀಲನೆ ನಡೆಸಬೇಕು ಎಂದು ಹೇಳಲಾಗಿದೆ.