alex Certify BREAKING: ಸಿಲಿಂಡರ್ ಸ್ಪೋಟಗೊಂಡು ಮೂರು ಮನೆಗೆ ಬೆಂಕಿ: ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಲಿಂಡರ್ ಸ್ಪೋಟಗೊಂಡು ಮೂರು ಮನೆಗೆ ಬೆಂಕಿ: ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರು

ಹಾಸನ: ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಹೊತ್ತಿ ಹುಟ್ಟಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ.

ಚೆನ್ನಬಸವಯ್ಯ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸಿದೆ. ಚೆನ್ನಬಸವಯ್ಯ, ರಾಮಣ್ಣ, ರೇಣುಕಪ್ಪ ಅವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. ಮೂರು ಮನೆಗಳಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಘಟನೆಯಲ್ಲಿ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...