alex Certify BIG UPDATE : ಬೆಂಗಳೂರಲ್ಲಿ ಅಗ್ನಿ ಅವಘಡ : ಮಡ್ ಪೈಪ್ ಕೆಫೆ ಮಾಲೀಕನ ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಂಗಳೂರಲ್ಲಿ ಅಗ್ನಿ ಅವಘಡ : ಮಡ್ ಪೈಪ್ ಕೆಫೆ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರಲ್ಲಿ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮಡ್ ಪೈಪ್ ಕೆಫೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಡ್ ಪೈಪ್ ಕೆಫೆ ಮಾಲೀಕ ಕರಣ್ ಜೈನ್ ವಿರುದ್ಧ ಎಸ್ ಟಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟ್ಟಡದಿಂದ ಜಿಗಿದ ಪ್ರೇಮ್ ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಹಿನ್ನೆಲೆ

ಕೋರಮಂಗಲದ ಹುಕ್ಕಾ ಕೆಫೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನೋಡ ನೋಡುತ್ತಿದ್ದಂತೆ 4 ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಪಬ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಕೋರಮಂಗಲದ ಮಡ್ ಪೈಪ್ ಹುಕ್ಕಾ ಕೆಫೆಯ ನಾಲ್ಕನೇ ಮಹಡಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕ್ಷಣಾರ್ಧದಲ್ಲಿ ಇಡೀ ಕೆಫೆ ಆಹುತಿಯಾಗಿದೆ. ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ನಾಲ್ಕನೇ ಮಹಡಿಯ ಕೆಳಭಾಗಕ್ಕೂ ಬೆಂಕಿ ಆವರಿಸಿದ್ದು, ಐಷಾರಾಮಿ ಕಾರು,ಬೈಕ್ ಗಳು ಬೆಂಕಿಗಾಹುತಿಯಾಗಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...