alex Certify SBI ಬ್ಯಾಂಕ್ ನಲ್ಲಿ ಅಗ್ನಿಅವಘಡ: ಕಂಪ್ಯೂಟರ್, ಪೀಠೋಪಕರಣ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SBI ಬ್ಯಾಂಕ್ ನಲ್ಲಿ ಅಗ್ನಿಅವಘಡ: ಕಂಪ್ಯೂಟರ್, ಪೀಠೋಪಕರಣ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿ

ಶಿವಮೊಗ್ಗ: ಎಸ್.ಬಿ.ಐ. ಬ್ಯಾಂಕ್ ಶಾಖೆಯಲ್ಲಿ ಬೆಂಕಿ ತಗುಲಿದ್ದು, ಪೀಠೋಪಕರಣ, ಕಂಪ್ಯೂಟರ್ ಸೇರಿ ವಸ್ತುಗಳು ಸುಟ್ಟು ಕರಕಲಾಗಿವೆ.

ಶಿವಮೊಗ್ಗ ವಿದ್ಯಾನಗರದ ಮುಖ್ಯರಸ್ತೆಯಲ್ಲಿರುವ ಎಸ್.ಬಿ.ಐ. ಬ್ಯಾಂಕ್ ಶಾಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಢ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರವಾದ್ದರಿಂದ ಬ್ಯಾಂಕ್ ಗೆ ರಜೆ ಇದ್ದು, ಬ್ಯಾಂಕ್ ಕಿಟಕಿಯಲ್ಲಿ ಹೊಗೆ ಕಾಣಿಸಿಕೊಂಡಾಗಲೇ ಬೆಂಕಿ ಹೊತ್ತಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಪರಿಶೀಲನೆ ನಡೆಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಬ್ಯಾಂಕ್ ನಲ್ಲಿದ್ದ ಪೀಠೋಪಕರಣ ಮತ್ತು ಕೆಲ ಕಂಪ್ಯೂಟರ್ ಗಳು ಬೆಂಕಿಗಾಹುತಿಯಾಗಿವೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...