
ಹಾವೇರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 50 ಎಕರೆ ಕಬ್ಬು ಸುಟ್ಟು ಭಸ್ಮವಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ 16 ರೈತರಿಗೆ ಸೇರಿದ 50 ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ಜಮೀನು ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವಘಡ ಸಂಭವಿಸಿದೆ. ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಅಗ್ನಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.