ಚಿಕ್ಕಬಳ್ಳಾಪುರ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ನಿವಾಸದ ಮುಂದೆ ಸ್ಕಾರ್ಪಿಯೋ ಕಾರ್ ಹೊತ್ತಿ ಉರಿದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಮಾಡಪ್ಪಲ್ಲಿ ಬಡಾವಣೆಯಲ್ಲಿರುವ ಸಚಿವರ ನಿವಾಸದ ಬಳಿ ಘಟನೆ ನಡೆದಿದೆ. ಸಚಿವ ಸುಧಾಕರ್ ನಿವಾಸದ ಬಳಿ ಕಾರ್ ನಿಲ್ಲಿಸಲಾಗಿತ್ತು. ಈ ವೇಳೆ ಬೆಂಕಿ ತಗುಲಿದೆ ಎನ್ನಲಾಗಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗಿದೆ. ಘಟನೆಯ ಬಳಿಕ ಸ್ಕಾರ್ಪಿಯೋ ಕಾರ್ ಮಾಲೀಕ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಚಿಂತಾಮಣಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.