
ಬೆಂಗಳೂರಿನಲ್ಲಿ ಮೊಹಮ್ಮದ್ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೈಯದ್ ಮೋಹಿನ್, ಅದ್ನಾನ್ ಖಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ ಗುಂಡುಹಾರಿಸಿ ಇಬ್ಬರನ್ನು ಬಂಧಿಸಲಾಗಿದೆ. ಇವರೊಂದಿಗೆ ಅರ್ಬಾಜ್, ಮಜರ್ ಮತ್ತು ಸೈಯದ್ ಶಾಹಿದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಗಲಾಟೆ ನಡೆದು ಮೊಹಮ್ಮದ್ ಉಸ್ಮಾನ್ ನನ್ನು ಕೊಲೆ ಮಾಡಲಾಗಿತ್ತು. ಪುಲಕೇಶಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮುಂಜಾನೆ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದರು.
ಈ ವೇಳೆ ಪೊಲೀಸರ ಮೇಲೆ ಇಬ್ಬರು ಆರೋಪಿಗಳು ಹಲ್ಲೆ ಮಾಡಿದ್ದು, ತಕ್ಷಣವೇ ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಕಲ್ಲಪಲ್ಲಿ ಬೈಯಪ್ಪನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ. ಪೊಲೀಸರು 5 ಮಂದಿ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.