ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.
ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಆರೋಪಿಗಳಾದ ವಿನಯ್ ಮತ್ತು ತ್ರಿಮೂರ್ತಿ ಅವರ ಮೇಲೆ ಫೈರಿಂಗ್ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಹೊರವಲಯದ ರೈಲ್ವೆ ಕ್ರಾಸಿಂಗ್ ಬಳಿ ಫೈರಿಂಗ್ ಮಾಡಲಾಗಿದೆ. ಮುಂಜಾನೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದಾರೆ. ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಹರೀಶ್ ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.