alex Certify ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದೆ. ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ.

ರಾತ್ರಿ 9.30 ರ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ಸವಾರ ಅನಿಲ್ ಎಂಬುವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ಮತ್ತು ಆಡಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ಆಡಿ ಕಾರ್ ಚಾಲಕ ತನ್ನ ಬಳಿಯಿದ್ದ ಗನ್ ನಿಂದ ಏಕಾಏಕಿ ಫೈರಿಂಗ್ ಮಾಡಿದ್ದಾನೆ. ಎರಡು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ ವೇಳೆ ಅದೃಷ್ಟವಶಾತ್ ಬೈಕ್ ಸವಾರ ಅನಿಲ್ ಪಾರಾಗಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...