
ಬೆಂಗಳೂರು: ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಬೆಂಗಳೂರಿನ ಕೆ. ಚನ್ನಸಂದ್ರದಲ್ಲಿ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಸ್ಥಳ ಮಹಜರು ಮಾಡುವ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಆರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್ ಪರಾರಿಯಾಗಲೆತ್ನಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚನೆ ನೀಡಿದರೂ, ಕೇಳದೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ರಿದಾಯ್ ಬಾಬು ಮತ್ತು ಸಾಗರ್ ಅವರ ಕಾಲಿಗೆ ಗುಂಡು ಹಾರಿಸಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಬಾಂಗ್ಲಾ ಮೂಲದ ಯುವಕರ ತಂಡ ಅಕ್ರಮವಾಗಿ ನೆಲೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದರು. 10 ದಿನಗಳ ಹಿಂದೆ ಸ್ನೇಹಿತೆಯಾಗಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆಕೆಯಯನ್ನು ಹಿಂಸಿಸಿ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ದೇಶಾದ್ಯಂತ ವಿಡಿಯೋ ಬಗ್ಗೆ ಗಮನ ಸೆಳೆದಿದ್ದು, ನಿನ್ನೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿದ್ದ ಯುವತಿ ಸೇರಿದಂತೆ ಐವರನ್ನು ಬಂಧಿಸಿದ್ದು, ಇಂದು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.