ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಂಧಿಸಲು ತೆರಲಿದ್ದ ಪೊಲೀಸರ ಮೇಲೆಯೇ ದಾಳಿ ಮಾಡಿದ ರೌಡಿಶೀಟರ್ ಕಿರಣ್ ಅಲಿಯಾಸ ಚಡ್ಡಿ ಕಿರಣನ ಮೇಲೆ ಫೈರಿಂಗ್ ಮಾಡಲಾಗಿದೆ.
ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದಿದ್ದ ಕಿರಣನನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಲಗ್ಗೆರೆ ಸೇತುವೆ ಬಳಿ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದ್ದು, ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.