ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ಬೇಟೆಗೆ ತೆರಳುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಒಬ್ಬರು ಗಾಯಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸರು ಬೇಟೆಗೆ ತೆರಳುತ್ತಿದ್ದವರನ್ನು ಬಂಧಿಸಿ ಪರಿಶೀಲನೆ ನಡೆಸುವಾಗ. ಮಿಸ್ ಫೈರಿಂಗ್ ಆಗಿ ನ್ಯಾಮತಿ ಠಾಣೆ ಕಾನ್ಸ್ಟೇಬಲ್ ನಾಗರಾಜ್ ಅವರಿಗೆ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.