ಶಿವಮೊಗ್ಗ: ಶಿಕಾರಿಯ ಸಂದರ್ಭದಲ್ಲಿ ಹಾರಿಸಿದ ಗುಂಡು ಮಿಸ್ ಫೈರ್ ಆಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಅರಳಸುರಳಿ, ನೊಣಬೂರು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಾಂತರಾಜು(40) ಮೃತಪಟ್ಟವರು ಎಂದು ಹೇಳಲಾಗಿದೆ. ನೊಣಬೂರು ಅರಳಸುರಳಿ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ 12 ಜನರ ಗುಂಪು ಬೇಟೆಯಾಡಲು ಹೋಗಿದ್ದು, ಈ ವೇಳೆ ಮಿಸ್ ಫೈರ್ ಆಗಿ ಕಾಂತರಾಜ್ ಮೃತಪಟ್ಟಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.