
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಘಟನೆ ನಡೆದಿದೆ.
ಗುಂಡಿನ ಗಾಳಿಯಲ್ಲಿ ಮಧು ನಾಣಯ್ಯ(42) ಸಾವನ್ನಪ್ಪಿದ್ದಾರೆ. ತಡರಾತ್ರಿ 12 ಗಂಟೆ ಸುಮಾರಿಗೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ವಿರಾಜಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಗಳ್ಳರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.