ವಿಜಯಪುರ: ಗಣರಾಜ್ಯೋತ್ಸವ ಅಂಗವಾಗಿ ಧ್ವಜ ಹಾರಿಸುವ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗ್ರಾಪಂ ಅಧ್ಯಕ್ಷೆ ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ.
ಮಲ್ಲಿಕಾರ್ಜುನ ಎಂಬ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಾಯಗೊಂಡಿರುವ ಗ್ರಾಪಂ ಅಧ್ಯಕ್ಷೆ ಸೋಮವ್ವ ಹೊಸಮನಿ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋಮವ್ವ ಮೊದಲ ಬಾರಿಗೆ ಧ್ವಜ ಹಾರಿಸಲು ಬಂದಿದ್ದು, ಅವರ ಬೆಂಬಲಿಗ ಮಲ್ಲಿಕಾರ್ಜುನ ಹುರುಪಿನಿಂದ ಯಾರಿಗೂ ಗೊತ್ತಾಗದಂತೆ ಗಾಳಿಯಲ್ಲಿ ಎರಡು ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.