ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿ ವ್ಯಕ್ತಿಗಳು ದುಷ್ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಮನೆಯ ಮುಂದಿನ ಕಟ್ಟೆಯ ಮೇಲೆ ಕುಳಿತುಕೊಂಡಿದ್ದ ಸಲ್ಮಾ ಅವರ ಮೇಲೆ ಫೈರಿಂಗ್ ಮಾಡಲಾಗಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಸಲ್ಮಾ ಪಾರಾಗಿದ್ದಾರೆ. ಕತ್ತಲೆಯ ವೇಳೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮನೆಯ ಗೋಡೆಗಳಿಗೆ ಗುಂಡು ತಗುಲಿದೆ.
ಸ್ಥಳಕ್ಕೆ ಎಸ್.ಪಿ. ಹನುಮಂತರಾಯ, ಎ.ಎಸ್.ಪಿ. ವಿಜಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂದೂಕಿನಿಂದ ಗುಂಡು ಹಾರಿಸಿ ಪರಾರಿಯಾದವರಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.