
ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೊಸಕೆರೆಹಳ್ಳಿ ಸಮೀಪ ಹನುಮಗಿರಿ ಬೆಟ್ಟದಲ್ಲಿ ಗುಂಡಿನ ದಾಳಿ ನಡೆಸಿ ಕೊಲೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಕೊಲೆ ಆರೋಪಿ ಧನುಷ್ ಮೇಲೆ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಾರ್ಚ್ 24 ರಂದು ಮಂಜು ಅಲಿಯಾಸ್ ದಡಿಯಾ ಮಂಜ ಎಂಬುವನನ್ನು ಹತ್ಯೆ ಮಾಡಲಾಗಿತ್ತು. ಇಟ್ಟಮಡು ಸಮೀಪ ರೂಮ್ ನಲ್ಲಿ ಆತನನ್ನು ಕೊಲೆ ಮಾಡಲಾಗಿದ್ದು, ಆರೋಪಿ ಧನುಷ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಧನುಷ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಆತನನ್ನು ವಶಖ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.