ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಹಿನ್ನಲೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಮಂಗಳೂರಿನ ಆಶೀಕ್, ಇಸಾಕ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಆತ್ಮರಕ್ಷಣೆಗೆ ಗುಂಡುಹಾರಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪಿಎಸ್ಐ ಉಮೇಶ್ ಅವರ ಎದೆಗೆ ಡೆಡ್ಲಿ ರಾಬರ್ಸ್ ಚಾಕುವಿನಿಂದ ಇರದಿದ್ದರು.
ಕೊತ್ತನೂರು ಠಾಣೆ ಇನ್ಸ್ ಪೆಕ್ಟರ್ ಚೆನ್ನೇಶ್ ಗುಂಡಿನ ದಾಳಿ ನಡೆಸಿದ್ದಾರೆ. ಮಾರ್ಚ್ 26 ರಂದು ಕಾರ್ ಅಡ್ಡಗಟ್ಟಿ ಆರೋಪಿಗಳು ಸುಲಿಗೆ ಮಾಡಿದ್ದರು. ಸುಲಿಗೆ ಮಾಡಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಸಂಪಿಗೆಹಳ್ಳಿ ಉಪವಿಭಾಗ ಎಸಿಪಿ ರಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಗಾಯಾಳು ಪಿಎಸ್ಐ ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ತಿಂದ ಆರೋಪಿಗಳನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಆರೋಪಿಗಳಿಗೆ ಚಿಕಿತ್ಸೆ ನೀಡಲಾಗಿದೆ.