
ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನಾಪ್ ಮತ್ತು ಕೊಲೆ ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಬೆಂಗಳೂರಿನಲ್ಲಿ ಆರೋಪಿಗಳಾದ ಅಂಬರೀಶ್, ಕವಿರಾಜ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಫೈನಾನ್ಸಿಯರ್ ವಿಜಯಕುಮಾರ್ ಅವರನ್ನು ಅಪಹರಿಸಿ ಹತ್ಯೆ ಮಾಡಿದ್ದರು. ಕೇಸ್ ಸಂಬಂಧ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದು, ಎಸಿಪಿ ಕುಮಾರ್ ಮತ್ತು ಇನ್ಸ್ ಪೆಕ್ಟರ್ ಹರೀಶ್ ಅವರ ತಂಡ ತೆರಳಿತ್ತು. ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲೆತ್ನಿಸಿದ್ದಾರೆ. ಈ ವೇಳೆ ಅಂಬರೀಶ್ ಮತ್ತು ಕವಿರಾಜ್ ಅವರ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.