
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ
ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಲ್ಲಘಟ್ಟ ಬಳಿ ಶರಣಾಗಲು ಪೊಲೀಸರು ಸೂಚನೆ ನೀಡಿದರೂ, ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಲಾಗಿದೆ.
ಬನ್ನೇರುಘಟ್ಟ, ಹೆಚ್ಎಸ್ಆರ್ ಲೇಔಟ್ ಠಾಣೆಯ ರೌಡಿಶೀಟರ್ ಲೋಹಿತ್ ಮೇಲೆ ಚಲ್ಲಘಟ್ಟ ಬಳಿ ಇಂದಿರಾನಗರ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡೇಟು ತಗುಲಿದ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.