
ಶಿವಮೊಗ್ಗ: ಕೊಲೆ, ಕೊಲೆ ಯತ್ನ, ದರೋಡೆ ಸೇರಿ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಪರ್ ಟೌನ್ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ನಾಗಮ್ಮ ಅವರು ರೌಡಿಶೀಟರ್ ಕಡೆಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೊಲೆ ಯತ್ನಪ್ರಕರಣದಲ್ಲಿ ರೌಡಿಶೀಟರ್ ಕಡೇಕಲ್ ಅಬೀದ್ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.
ಇಂದು ಅಬೀದ್ ಅಡಗಿರುವ ಸ್ಥಳದ ಮಾಹಿತಿ ಗೊತ್ತಾಗಿ ಇನ್ಸ್ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ತೆರಳಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ಅಬೀದ್ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಇನ್ಸ್ಪೆಕ್ಟರ್ ನಾಗಮ್ಮ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗಾಯಗೊಂಡ ಅಬೀದ್ ನನ್ನು ವಶಕ್ಕೆ ಪಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿ ಅರುಣ್ ಕುಮಾರ್ ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಬೀದ್ ವಿರುದ್ಧ ವಿವಿಧ ಠಾಣೆಗಳಲ್ಲಿ 20 ಪ್ರಕರಣಗಳಿವೆ ಎಂದು ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದ್ದಾರೆ.