
ಶಿವಮೊಗ್ಗ: ಹೊಸ ವರ್ಷಾಚರಣೆ ವೇಳೆ ಗುಂಡು ಹಾರಿಸುವಾಗ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಇದೇ ವೇಳೆ ಗುಂಡು ಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶಿವಮೊಗ್ಗದ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಮಂಜುನಾಥ್ ಓಲೆೇಕರ್ ಅವರ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ನಡೆಯುವಾಗ ರಾತ್ರಿ 12 ಗಂಟೆಗೆ ಮಂಜುನಾಥ್ ಓಲೇಕರ್ ಗಾಳಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದಾರೆ. ಆದರೆ, ಆಕಸ್ಮಿಕವಾಗಿ ವಿನಯ್ ಎಂಬ ಯುವಕನಿಗೆ ಗುಂಡು ತಗುಲಿದೆ. ಗಂಭೀರವಾಗಿ ಗಾಯಗೊಂಡ ವಿನಯ್ ನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಘಾತಕ್ಕೆ ಒಳಗಾದ ಮಂಜುನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.