
ಮಡಿಕೇರಿ: ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ.
ಮಜೀದ್(45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿದೆ. ಹೊಸಗುತ್ತಿ ಗ್ರಾಮದ ರೈತ ಮಜೀದ್ ಮನೆಯಲ್ಲಿಯೇ ಗುಂಡು ಹಾರಿಸಿಕೊಂಡಿದ್ದಾರೆ. ಅವರು ವಿಪರೀತ ಸಾಲ ಮಾಡಿಕೊಂಡಿದ್ದರು. ಸಾಲದ ಸುಳಿಗೆ ಸಿಲುಕಿ ಕೋವಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.