ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಿದ್ದು, ಇದೀಗ ಸಾರ್ವಜನಿಕ ಸಾರಿಗೆಯಲ್ಲಿಯೂ ವಿದ್ಯುತ್ ಚಾಲಿತ ಬಸ್ ಆರಂಭವಾಗಿದೆ. ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ನ್ನು ಸಾರಿಗೆ ಸಚಿವ ಶ್ರೀರಾಮುಲು ಅನಾವರಣಗೊಳಿಸಿದ್ದಾರೆ.
ಬೆಂಗಳೂರಿನ ಕೆಂಗೇರಿ ಘಟಕದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸಿದ್ಧಗೊಂಡಿರುವ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪರಿಶೀಲಿಸಿದ ಸಚಿವರು, ನೂತನ ಬಸ್ ಅನಾವರಣಗೊಳಿಸಿದರು. ಈ ಬಸ್ 45 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್ ಆಗಲಿದ್ದು, ಒಮ್ಮೆ ಚಾರ್ಜ್ ಮಾಡಿದರೆ 120 ಕಿ.ಮೀ. ಚಲಿಸುವ ಸಾಮರ್ಥ್ಯ ಹೊಂದಿದೆ.
ವರ್ಕ್ ಫ್ರಂ ಹೋಮ್ ನಿಂದ ಯುವಕರನ್ನು ಕಾಡ್ತಿದೆ ಈ ಸಮಸ್ಯೆ
ಈ ಕುರಿತು ಟ್ವೀಟ್ ಮಾಡಿರುವ ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಪರಿಶೀಲಿಸಿದ್ದು, ನವೆಂಬರ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ 90 ಬಸ್ ಗಳ ಹಸ್ತಾಂತರ ಮಾಡಲಿದ್ದಾರೆ. ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.