alex Certify ಶಾಕಿಂಗ್ ನ್ಯೂಸ್: ಮನೆಯಲ್ಲೇ ಸ್ನೇಹಿತನೊಂದಿಗೆ ಪಾರ್ಟಿ ಮಾಡಿದ ಬಳಿಕ ತಂದೆಯಿಂದಲೇ ನೀಚಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಮನೆಯಲ್ಲೇ ಸ್ನೇಹಿತನೊಂದಿಗೆ ಪಾರ್ಟಿ ಮಾಡಿದ ಬಳಿಕ ತಂದೆಯಿಂದಲೇ ನೀಚಕೃತ್ಯ

ಪಾಟ್ನಾ: ಬಿಹಾರದ ಘೋಷ್ವರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನೊಂದಿಗೆ ಸೇರಿ 12 ವರ್ಷದ ಮಲಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಪಾರ್ಟಿಗಾಗಿ ಸ್ನೇಹಿತನನ್ನು ಮನೆಗೆ ಕರೆಸಿಕೊಂಡ ಕಿಡಿಗೇಡಿ ಮದ್ಯದ ಅಮಲಿನಲ್ಲಿ ಅಶ್ಲೀಲವಾಗಿ ಮಾತನಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಇದನ್ನು ವಿರೋಧಿಸಿದ ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ ಮಾಡಿದ ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ತಾಯಿ ಆರೋಪಿಯನ್ನು ಎರಡನೇ ಮದುವೆಯಾಗಿದ್ದು, ಆತ ಸ್ನೇಹಿತನನ್ನು ಮನೆಗೆ ಕರೆಸಿಕೊಂಡು ಇಂತಹ ಕೃತ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪರಾರಿಯಾಗಿರುವ ಸ್ನೇಹಿತನ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...