ಬೆಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಆಧಾರಿತ ಇಂಟರ್ನೆಟ್ ಸೇವೆ ಶೇ 96.86ರಷ್ಟು ಲಭ್ಯವಿದೆ. ಶೇ 80ಕ್ಕೂ ಹೆಚ್ಚು ಜನರು ವಾಟ್ಸಾಪ್ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಜನರಿಗೆ ಈ ಸೇವೆ ಪಡೆಯುವುದು ಸುಲಭವಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಯಾರಿಗೆ ಬಳಕೆ ಮಾಡಲು ಗೊತ್ತಾಗುವುದಿಲ್ಲವೋ ಅವರ ಸಹಾಯಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಇಬ್ಬರು ಡೇಟಾ ಆಪರೇಟರ್ಗಳನ್ನು ನೇಮಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಜನರಿಗಾಗಿ ಸರ್ಕಾರದ 89 ಸೇವೆಗಳು ಒಂದೇ ಪೋರ್ಟಲ್ ಹಾಗೂ ವಾಟ್ಸಾಪ್ ಚಾಟ್ನಲ್ಲಿ ಲಭ್ಯವಿರುತ್ತದೆ. ರಾಜ್ಯದ 5,991 ಗ್ರಾಮಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ಸರ್ಕಾರ ದಾಪುಗಾಲು ಇಡುತ್ತಿದೆ.
ಯಾರಿಗೆ ಬಳಕೆ ಮಾಡಲು ಗೊತ್ತಾಗುವುದಿಲ್ಲವೋ ಅವರ ಸಹಾಯಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಇಬ್ಬರು ಡೇಟಾ ಆಪರೇಟರ್ಗಳನ್ನು ನೇಮಿಸಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.