ನವದೆಹಲಿ: ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ದೆಹಲಿಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಮಂಕಿಪಾಕ್ಸ್ ಸೋಮಕಿತರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಮೊದಲ ಕೇಸ್ ಕಂಡು ಬಂದಿತ್ತು.
ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ದೃಢಪಡಿಸಿದೆ. ರೋಗಿಯು ಯಾವುದೇ ಪ್ರಯಾಣದ ಇತಿಹಾಸವನ್ನು ಹೊಂದಿರದ 31 ವರ್ಷದ ವ್ಯಕ್ತಿಯಾಗಿದ್ದು, ಜ್ವರ ಮತ್ತು ಚರ್ಮದ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.